ಭಾರತದಲ್ಲಿ ಮತದಾನ ಪ್ರಮಾಣವ ಹೆಚ್ಚಿಸಲು USAID: ಶ್ವೇತಪತ್ರಕ್ಕೆ ಕಾಂಗ್ರೆಸ್ ಆಗ್ರಹ

0
cong

ನವದೆಹಲಿ: ಭಾರತದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು USAID ಹಣಕಾಸು ನೆರವು ನೀಡಿರವ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ದಶಕಗಳಲ್ಲಿ ಭಾರತದಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ US ಏಜೆನ್ಸಿಯ ಬೆಂಬಲದ ಕುರಿತ ಮಾಹಿತಿ ಬಹಿರಂಗಪಡಿಸುವಂತೆ ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್‌ನಲ್ಲಿ ಹಾಕಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, USAID ಬಹಳ ಸುದ್ದಿಯಲ್ಲಿದೆ. ಈ ಕುರಿತ ಅಮೆರಿಕ ಅಧ್ಯಕ್ಷರ ಹೇಳಿಕೆಗಳು ಅಸಂಬದ್ಧವಾಗಿವೆ’ ಎನ್ನಲಾಗುತ್ತಿದೆ. ಆದರೂ ದಶಕಗಳಲ್ಲಿ ಭಾರತದ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ USAID ನೀಡಿರುವ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You may have missed