ಭಾರೀ ಮಳೆಗೆ ರಾಜ್ಯದ ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

0
udupi rain1

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕನ್ನಡ, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ತೀವ್ರಗೊಂಡಿದೆ.

ಹವಾಮಾನ ಇಲಾಖೆ ಬುಧವಾರವೂ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಉಂಟಾಗುವ ತೊಂದರೆಗಳನ್ನು ಮನಗಂಡು ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ (ಜೂನ್‌ 25) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಈ ಮೂಲಕ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತುರ್ತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಭಾಗದ ಸಾರ್ವಜನಿಕರು ಹಾಗೂ ಪಾಲಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತದಿಂದ ಮನವಿ ಮಾಡಲಾಗಿದೆ.

 

Leave a Reply

Your email address will not be published. Required fields are marked *

You may have missed