ಭ್ರಷ್ಟರ ವಿರುದ್ದ ಭ್ರಹ್ಮಾಸ್ತ್ರ; ಹಲವೆಡೆ ಲೋಕಾಯುಕ್ತ ದಾಳಿ

0
police -hoysala-1

ದೊಡ್ಡಬಳ್ಳಾಪುರ: ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿವಾಸಗಳ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ‌ ಕೈಗೊಂಡು, ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಕೊಡಿಗೇಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗಸ್ವಾಮಿ‌ ಹಾಗೂ ಅವರ ಅಳಿಯನಾದ ರಾಜಾಜಿನಗರದಲ್ಲಿ‌ ಕಂದಾಯ‌ ನಿರೀಕ್ಷರಾಗಿರುವ ಶ್ರೀನಿವಾಸ್ ಅವರ ನಿವಾಸಗಳ ಮೇಲೆ‌ ಲೋಕಾಯುಕ್ತ‌ ಪೊಲೀಸರು ದಾಳಿ‌ ನಡೆಸಿದ್ದಾರೆ.

ದೊಡ್ಡಬಳ್ಳಾಪುರದ ಟಿ.ಬಿ.ನಾರಾಯಣಪ್ಪ ಬಡಾವಣೆಯಲ್ಲಿರುವ ರಂಗಸ್ವಾಮಿ ಅವರ ನಿವಾಸ, ವಾಣಿಜ್ಯ ಸಂಕೀರ್ಣ, ಪಾಲನ‌ಜೋಗಹಳ್ಳಿಯ‌ ನಿವಾಸಗಳ ಮೇಲೂ ಲೋಕಾಯುಕ್ತಕ್ಕೆ ಅಧಿಕಾರಿಗಳು ದಾಳಿ‌ ನಡೆಸಿ ಕಡತಗಳ ಪರಿಶಿಲನೆ‌ ನಡೆಸಿದರು.

ಸ್ವಂತ ಊರಾದ ತೂಬಗೆರೆ ಹೋಬಳಿಯ ಸೋತೇನಹಳ್ಳಿ ಗ್ರಾಮದ ನಿವಾಸ, ರಾಜಾನುಕುಂಟೆಯ ಕಾಕೋಳು ರಸ್ತೆಯಲ್ಲಿರುವ 7 ಕೋಟಿ ಬೆಲೆ ಬಾಳುವ ನಿವಾಸ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಬಳಿಯ ಜಮೀನು ಸೇರಿದಂತೆ ಹಲವೆಡೆ ಲೋಕಾಯುಕ್ತ ಪೊಲೀಸರು ದಾಳಿ‌ ಕೈಗೊಂಡಿದ್ದಾರೆ.

ಸುಮಾರು‌ 20 ಅಧಿಕಾರಿಗಳ ತಂಡ ಬೆಳಿಗ್ಗೆ 5.30ಕ್ಕೆ ಏಕಕಾಲದಲ್ಲಿ‌ ದಾಳಿ‌ ನಡೆಸಿದ್ದು, ಅದಾಯಕ್ಕಿಂತ ಹೆಚ್ಚು ಆಸ್ತಿ‌ ಹಾಗೂ ಬೇನಾಮಿ‌ ಹೆಸರಿನಲ್ಲಿ ಆಸ್ತಿ ಹೊಂದಿರುವ ಆರೋಪದ ಮೇಲೆ ದಾಳಿ‌ ಮಾಡಿ ದಾಖಲೆ‌ ಪರಿಶೀಲಿದ್ದಾರೆ. ಪಿಎಒ ರಂಗಸ್ವಾಮಿ‌ಅವರ ಪತ್ನಿ ಗೌರಮ್ಮ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆಯಾಗಿದ್ದಾರೆ. ಪರಿಶೀಲನೆ ವೇಳೆ ತೂಬಗೆರೆ ಗ್ರಾಮ‌ಪಂಚಾಯ್ತಿ ವ್ಯಾಪ್ತಿಯಲ್ಲಿ‌ 28 ಎಕರೆ ಜಮೀನು ಹೊಂದಿರುವುದು‌ ಪತ್ತೆಯಾಗಿದೆ.

Leave a Reply

Your email address will not be published. Required fields are marked *

You may have missed