ಭ್ರಷ್ಟಾಚಾರ, ಅಧಿಕಾರ ದುರುಪಯೋಗ; ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ ಬಂಧನ

0
South Korean President Yoon Suk-yeol

ಸಿಯೋಲ್: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ ಅವರ ಬಂಧನವಾಗಿದೆ. ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಯೂನ್ ಸುಕ್ ಯೋಲ್ ಅವರನ್ನು ಬಂಧಿಸಿದ್ದಾರೆ.

ದಕ್ಷಿಣ ಕೊರಿಯಾದ ನ್ಯಾಯಾಲಯ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್​ ಜಾರಿಯಾಗಿತ್ತು. ದಂಗೆ ಮತ್ತು ಅಧಿಕಾರ ದುರುಪಯೋಗದ ಆರೋಪಗಳ ಬಗ್ಗೆ ತನಿಖಾಧಿಕಾರಿಗಳು ದೋಷಾರೋಪ ಹಾರಿದ್ದು, ಈ ಆರೋಪಗಳ ಗಂಭೀರತೆ ಅರಿತ ಸಿಯೋಲ್ ನ್ಯಾಯಾಲಯವು ಯೂನ್ ಸುಕ್ ಯೋಲ್‌ಗೆ ಬಂಧನ ವಾರಂಟ್ ಹೊರಡಿಸಿತ್ತು.

ಜನವರಿ 15 ರ ಬುಧವಾರ ಬೆಳಗ್ಗೆ, ದಕ್ಷಿಣ ಕೊರಿಯಾದ ಅಧಿಕಾರಿಗಳು ಯುನ್ ಸುಕ್ ಯೋಲ್ ನಿವಾಸಕ್ಕೆ ತೆರಳಿ ಬಂಧಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed