ಮಧ್ಯಪ್ರಾಚ್ಯ ಸಂಘರ್ಷ; ಇರಾನ್ ಕ್ಷಿಪಣಿ ದಾಳಿಗೆ ಇಸ್ರೇಲ್ ಪ್ರತೀಕಾರ, ಲೆಬನಾನ್ ಮೇಲೆ ಬಾಂಬ್
ಗಾಜಾ: ಮಧ್ಯಪ್ರಾಚ್ಯವೂ ರಾಷ್ಟ್ರಗಳ ನಡುವಿನ ಸಮರ ಉಗ್ರ ಸ್ವರೂಪ ತಾಳಿದ್ದು, ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ಇಸ್ರೇಲ್ ಸೇನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ತನ್ನ ಮಿಲಿಟರಿ ಪದೇ ಲೆಬನಾನ್ ಮೇಲೆ ನಡೆಸಿದ ದಾಳಿ ವೇಳೆ 8 ಯೋಧರು ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿದೆ.
ಕಳೆದ ವಾರ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಇಸ್ರೇಲ್ ಪದೇ ದಾಳಿ ಮಾಡಿ ಹತ್ಯೆ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್ ವಾಯುಪಡೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಮಂಗಳವಾರ ನಡೆದ ಇರಾನ್‌ನ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಭರ್ಜರಿ ಕಾರ್ಯಾಚರಣೆ ಕೈಗೊಂಡಿದೆ. ಎರಡು ಪ್ರತ್ಯೇಕ ದಾಳಿಗಳಲ್ಲಿ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.