ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಮೇಲೆ ಕಲ್ಲು ತೂರಾಟ

0
Police-Crime-Arreat-2-300x187

ನಾಗ್ಪುರ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕ ಅನಿಲ್ ದೇಶ್‌ಮುಖ್ ಅವರ ಕಾರಿನ ಮೇಲೆ ದುಷ್ಕರ್ಮಿಗಖು ಕಲ್ಲು ತೂರಾಟ ನಡೆಸಿರುವ ಘಟನೆ ನಾಗ್ಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ದೇಶಮುಖ್ ಅವರಿಗೆ ಗಂಭೀರ ಗಾಯಗಳಾಗಿವೆ.

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ನಾರ್ಖೇಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ದೇಶಮುಖ್ ಅವರು, ಅಲ್ಲಿಂದ ಕಟೋಲ್‌ಗೆ ನಿರ್ಗಮಿಸಿದರು. ಅದಾಗಲೇ ಅಪರಿಚಿತರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ದೇಶಮುಖ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed