ಮಹಾಶಿವರಾತ್ರಿ ದಿನ ಮಾಂಸ ಮಾರಾಟ ನಿಷೇಧ; ಗ್ರೇಟರ್ ಬೆಂಗಳೂರು ಅಥಾರಿಟಿ ಆದೇಶ

0
bbmp

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15ರಂದು ನಗರ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಕುರಿತು ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಸಂಬಂಧ ಸೂಚನೆ ನೀಡಿದ್ದು, ಹಬ್ಬದ ದಿನ ನಗರದಲ್ಲಿನ ಎಲ್ಲ ಕಸಾಯಿಖಾನೆಗಳು ಮತ್ತು ಮಾಂಸ ಅಂಗಡಿಗಳು ಮುಚ್ಚಿರಬೇಕೆಂದು ತಿಳಿಸಲಾಗಿದೆ.

ಮಹಾಶಿವರಾತ್ರಿ ಹಿನ್ನೆಲೆ ಫೆಬ್ರವರಿ 15ರಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಮತ್ತು ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ನಾಗರಿಕರು ಮತ್ತು ವ್ಯಾಪಾರಿಗಳು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed