ಮಹಾ ಕುಂಭಮೇಳ: ಈವರೆಗೂ 60 ಕೋಟಿ ಮಂದಿ ಪುಣ್ಯಸ್ನಾನ

ಲಖನೌ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಈವರೆಗೆ ಸುಮಾರು 60 ಕೋಟಿ ಮಂದಿ ಪುಣ್ಯಸ್ನಾನ ಮಾಡಿದ್ದಾರೆ.
ಈ ಕುರಿತಂತೆ ಶನಿವಾರ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಸರ್ಕಾರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದುತಿಳಿಸಿದೆ.
ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿ ವರೆಗೂ ನಡೆಯಲಿದೆ. 144 ವರ್ಷಗಳಿಗೊಮ್ಮೆ ನಡೆಯುವ ಕುಂಭ ಮೇಳೆ ಕಣ್ತುಂಬಿಕೊಳ್ಳಲು ಪ್ರಯಾಗರಾಜ್ ಗೆ ಭಕ್ತರ ದಂಡೇ ಹರಿದು ಬರುತ್ತಿದೆ. ಇದೇ ರೀತಿಯ ಸ್ಥಿತಿ ಇದ್ದರೆ ಅಂತಿಮ ‘ಅಮೃತ ಸ್ನಾನ’ದ ವೇಳೆಗೆ ಈ ಸಂಖ್ಯೆ 65 ಕೋಟಿಯನ್ನು ಮೀರುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.