ಮಾಜಿ ಸಚಿವ ಅಂಜನಮೂರ್ತಿ ವಿಧಿವಶ

0

ಬೆಂಗಳೂರು: ಮಾಜಿ ಸಚಿವ ಅಂಜನಮೂರ್ತಿ ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಅವರು ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ಅಂಜನಮೂರ್ತಿ ಅವರು ಧರ್ಮಸಿಂಗ್ ಅವರ ಸಂಪುಟದಲ್ಲಿ ವಸತಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. ಜನಾನುರಾಗಿ ಆಗಿದ್ದರು. ಅವರ ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ ಎಂದವರು ಹೇಳಿದ್ದಾರೆ.

ನೆಲಮಂಗಲ ಕ್ಷೇತ್ರದ ಅಭಿವದ್ಧಿಗೆ ಸಾಕಷ್ಟು ಶ್ರಮಿಸಿದ್ದರು. ಪಕ್ಷದ ಸಂಘಟನೆಯಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು .ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿ ಬಳಗಕ್ಕೆ ನೀಡಲಿ ಎಂದು ಶಿವಕುಮಾರ್ ಪ್ರಾರ್ಥಿಸಿದ್ದಾರೆ.

ಅಂಜನಾಮೂರ್ತಿಯವರ ನಿಧನಕ್ಕೆ ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡಾ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You may have missed