ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಮಾಹಿತಿ

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಮುಂದಿನ ತಿಂಗಳ 7ರಂದು ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಅವರು ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘದ ಮುಖಂಡರುಗಳೊಂದಿಗೆ ಆಯವ್ಯಯ ಸಂಬಂಧ ಪೂರ್ವಭಾವಿ ಸಭೆ ನಡೆಸಿದರು. ರೈತರ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿ ಅಗತ್ಯ ಮಾಹಿತಿ ಸಂಗ್ರಹಿಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಂಬರುವ ಬಜೆಟ್ ಮಂಡನೆ ಬಗ್ಗೆ ಮಾಹಿತಿ ನೀಡಿದರು.
ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಮಾರ್ಚ್ 7ರಂದು ಬಜೆಟ್ ಮಂಡಿಸುವುದಾಗಿ ತಿಳಿಸಿದರು.