ಮಿಚಾಂಗ್ ಅವಾಂತರ; ಕೇಂದ್ರದಿಂದ 5,000 ಕೋಟಿ ತಕ್ಷಣದ ಪರಿಹಾರ ಕೋರಿದ ತಮಿಳುನಾಡು

chennai Rain - flood 2023

ದೆಹಲಿ: ಮಿಚಾಂಗ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ತೀವ್ರ ಹಾನಿ ಸಂಭವಿಸಿದ್ದು 5,000 ಕೋಟಿ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ನೀಡುವಂತೆ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ಚೆನ್ನೈ ಸಹಿತ ತಮಿಳುನಾಡಿನ ವಿವಿಧ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದ ಭಾರೀ ಹಾನಿ ಸಂಭವಿಸಿದೆ. ಸಂಕಷ್ಟದಲ್ಲಿರುವ ಜನರಿಗೆ ಪರಿಹಾರ ಮತ್ತು ಮೂಲಸೌಕರ್ಯಗಳನ್ನು ಮರುನಿರ್ಮಾಣ ಮಾಡಬೇಕಿದೆ. ಹಾಗಾಗಿ ತಕ್ಷಣ 5,000 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ನೀಡಬೇಕೆಂದು ಡಿಎಂಕೆ ನಾಯಕ ತಿರುಚಿ ಶಿವ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಿಚಾಂಗ್ ಚಂಡಮಾರುತ ಕುರಿತು ಗಮನ ಸೆಳೆದ ಡಿಎಂಕೆ ನಾಯಕ ತಿರುಚಿ ಶಿವ, ಭಾರೀ ಮಳೆಯು ಚೆನ್ನೈ ಮತ್ತು ಇತರ ಜಿಲ್ಲೆಗಳನ್ನು ಮುಳುಗಿಸಿದೆ. ಒಂದು ಮಗು ಸೇರಿದಂತೆ ಕನಿಷ್ಠ ಒಂಬತ್ತು ಜನರು ಪ್ರವಾಹದಲ್ಲಿ ಮೃತಪಟ್ಟಿದ್ದಾರೆ ಎಂದರು. ಮಳೆಯಿಂದಾಗಿ ವ್ಯಾಪಕ ಹಾನಿ ಸಂಭವಿಸಿದ್ದು ರಾಜ್ಯದಲ್ಲಿ ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಮಿಳುನಾಡಿನ ಸಂಸದರು ಕೇಂದ್ರ ಸರ್ಕಾರದ ಗಮನಸೆಳೆದರು.

You may have missed