ಮುಡಾ ಕೇಸ್; ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ವಿವಾದ ಕುರಿತಂತೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ ದಾಖಲಿಸಿದ್ದಾರೆ.
ಸ್ನೇಹಮಯಿ ಕೃಷ್ಣ ಎಂಬವರು ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ವಿಶೇಷ ಆದೇಶಿಸಿತ್ತು. ಅದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ದ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಅವರಿಗೆ ಮುಡಾದಿಂದ 14 ನಿವೇಶನಗಳನ್ನು ಹಂಚಿಕೆ ಮಾಡಿರುವ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕುರಿತಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಧಾವೆಯನ್ನು ಹೈಕೋರ್ಟ್ ವಜಾಮಾಡಿತ್ತು.