ಮೇಕೆದಾಟು ಜಾರಿಗೆ ಕಾನೂನು ತೊಡಕು ನಿವಾರಿಸಿ: ಸರ್ಕಾರಕ್ಕೆ ಡಿವಿಎಸ್ ಸಲಹೆ
ಬೆಂಗಳೂರು: ಮೇಕೆದಾಟು ಕಾನೂನು ತೊಡಕು ನಿವಾರಿಸಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕಾವೇರಿ ವಿವಾದ ಕುರಿತಂತೆ ಪ್ರತಿಕ್ರಿಯಿಸಿರುವ ಡಿ.ವಿ. ಸದಾನಂದಗೌಡ, ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ ಕರೆದಿರುವುದು ಸರಿಯಲ್ಲ. ಮೇಕೆದಾಟು ಯೋಜನೆ ಬಗ್ಗೆ ಕಾನೂನು ತೊಡಕುಗಳನ್ನು ನಿವಾರಿಸಿಕೊಂಡು ಮುಂದೆ ಸಾಗಬೇಕಿದೆ ತಮಿಳುನಾಡಿನಲ್ಲಿ ಇರುವ ಡ್ಯಾಮ್ಗಳ ನೀರಿನ ವಿವರ, ಅಲ್ಲಿನ ರೈತರ ಬೆಳೆ ಪದ್ಧತಿ, ಮೂರು ಬೆಳೆಯನ್ನ ಬೆಳೆಯುತ್ತಿರುವುದರ ಬಗ್ಗೆ ಅವರು ತಿಳಿಸಿದರು. ನಮ್ಮ ರೈತರು ಕೇವಲ ಎರಡು ಬೆಳೆ ಮಾತ್ರ ಬೆಳೆಯುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟಿಗೆ ಮನದಟ್ಟು ಮಾಡಿಕೊಟ್ಟು ಮೇಕೆದಾಟು ಯೋಜನೆ ಬಗ್ಗೆ ಅನುಮತಿ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.