‘ಯಾವುದೇ ಜಾತಿಗಳಿಗೂ ರೋಸ್ಟರ್’ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು’: ಅಧಿಕಾರಿಗಳಿಗೆ ಸಿಎಂ ಸೂಚನೆ

0

ಬೆಂಗಳೂರು: ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಚರ್ಚೆ ನಡೆದಿದೆ.

ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದವರು ತಿಳಿಸಿದರು.

ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದವರು ನಿರ್ದೇಶನ ನೀಡಿದರು.

Leave a Reply

Your email address will not be published. Required fields are marked *