Rajabhavan bengaluru - vidhanasoudha 1

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮತ್ತಷ್ಟು ಮಸೂದೆಗಳನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರು ಅಂಕಿತ ಹಾಕದೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಿಸಲಾಗಿದ್ದ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಮೂರು ಮಸೂದೆಗಳನ್ನು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024 ಮಸೂದೆಗಳನ್ನು ರಾಜ್ಯಪಾಲರು ವಾಪಸ್​ ಕಳುಹಿಸಿದ್ದಾರೆ ಎನ್ನಲಾಗಿದೆ. ತಿದ್ದುಪಡಿ ಉದ್ದೇಶದಿಂದ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Leave a Reply

Your email address will not be published. Required fields are marked *

You may have missed