ರಾಜ್ಯದ ಆರೋಗ್ಯ ಇಲಾಖೆ ಐಸಿಯುನಲ್ಲಿದೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

0
GR-MEDICAL-COLLEGE-HOSPITALHospital-karavali2-300x173-1

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯದ ಖಜಾನೆಯನ್ನು ಖಾಲಿ ಮಾಡಿ, ಆರೋಗ್ಯ ಇಲಾಖೆಯನ್ನು ಸಂಕಷ್ಟದ ಪರಿಸ್ಥಿತಿಗೆ ತಳ್ಳಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇದ್ದು, ತಕ್ಷಣವೇ ಅವುಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ‘ನಮ್ಮ ಕ್ಲಿನಿಕ್’ ಸಿಬ್ಬಂದಿಗೆ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರ ಬದಲಾಗಿದ್ದರೂ, ಆರೋಗ್ಯ ಇಲಾಖೆಯ ಪರಿಸ್ಥಿತಿ ಮಾತ್ರ ಬದಲಾಗಿಲ್ಲ ಎಂದು ಆರೋಪಿಸಿರುವ ಅಶೋಕ್, “ಮುಖ್ಯಮಂತ್ರಿಗಳು ಬದಲಾದರು, ಆರೋಗ್ಯ ಸಚಿವರು ಬದಲಾದರು. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಮರ್ಥತೆ ಮತ್ತು ಜನವಿರೋಧಿ ಆಡಳಿತ ಮಾತ್ರ ಬದಲಾಗಿಲ್ಲ. ಇಂದು ಆರೋಗ್ಯ ಇಲಾಖೆಯೇ ಐಸಿಯುನಲ್ಲಿರುವಂತಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಸಿಬ್ಬಂದಿ ಕೊರತೆಯಿಂದ ಬಳಲುತ್ತಿದ್ದು, ತುರ್ತು ಚಿಕಿತ್ಸೆಗೆ ಬರುವ ರೋಗಿಗಳನ್ನು ನೋಡಿಕೊಳ್ಳಲು ಅಗತ್ಯ ಸಿಬ್ಬಂದಿಯೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಮೂಲಭೂತ ಔಷಧಿಗಳ ಕೊರತೆಯೂ ಎದುರಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬಡವರು ಹಾಗೂ ಕಾರ್ಮಿಕ ವರ್ಗದ ಆರೋಗ್ಯ ಸೇವೆಗಾಗಿ ಆರಂಭಿಸಲಾಗಿದ್ದ ‘ನಮ್ಮ ಕ್ಲಿನಿಕ್’ ಯೋಜನೆಯ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ದೂರಿದ ಅಶೋಕ್, ವೈದ್ಯರು, ನರ್ಸ್‌ಗಳು ಹಾಗೂ ಇತರ ಸಿಬ್ಬಂದಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಸ್ಥಿತಿಗೆ ತಳ್ಳಿರುವುದು ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ” ಎಂದು ಟೀಕಿಸಿರುವ ಅವರು, ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ‘ನಮ್ಮ ಕ್ಲಿನಿಕ್’ ಸಿಬ್ಬಂದಿಯ ವೇತನ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಒಬ್ಬ ಪೂರ್ಣಾವಧಿ ಸಚಿವರನ್ನು ನೇಮಿಸಲು ಆಸಕ್ತಿ ಇಲ್ಲದ ಈ @INCKarnataka ಸರ್ಕಾರಕ್ಕೆ, ನಮ್ಮ ನಾಡು-ನುಡಿ, ಸಂಸ್ಕೃತಿಯ ಮೇಲೆ ಕಿಂಚಿತ್ತೂ ಗೌರವವಿಲ್ಲ.

ಸಚಿವರೇ ಇಲ್ಲದ ಇಲಾಖೆಯಲ್ಲಿ ಅಧಿಕಾರಿಗಳದ್ದೇ ದರ್ಬಾರಾಗಿದ್ದು, ಕಲಾವಿದರನ್ನು ಕೇಳುವವರೇ ಇಲ್ಲದಂತಾಗಿದೆ. ಇವರ ಆಡಳಿತ ವೈಫಲ್ಯಕ್ಕೆ ಕನ್ನಡಾಂಬೆಯ ಸೇವೆ… pic.twitter.com/vsNMpKIF6E

— R. Ashoka (@RAshokaBJP) June 27, 2026

Leave a Reply

Your email address will not be published. Required fields are marked *