ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳ ಒಂದೆರಡು ಕಡೆ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯ ನಿರೀಕ್ಷೆಯಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ ಜಿಲ್ಲೆಯ ಬೆಳ್ಳೂರಿನಲ್ಲಿ ಈಗಾಗಲೇ 7 ಸೆಂ.ಮೀ. ಮಳೆ ದಾಖಲಾಗಿದೆ.

ಇನ್ನು ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
