ರಾಜ್ಯ ಸಚಿವ ಸಂಪುಟ ಪುನಾರಚನೆ; ಸುಳಿವು ನೀಡಿದ ಸಿದ್ದರಾಮಯ್ಯ

0

ಕೋಲಾರ: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ.

ಕೋಲಾರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡಿ, “ಸಂಪುಟ ಪುನಾರಚನೆ ವೇಳೆ ನೋಡೋಣ,” ಎಂದು ಹೇಳಿದರು.

ಜಿಲ್ಲೆಯಲ್ಲಿ ನಾಲ್ಕು ಮಂದಿ ಶಾಸಕರು ಇದ್ದು, ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದು ಸಿಎಂ ತಿಳಿಸಿದರು.

ಇದೇ ವೇಳೆ ಮಾತನಾಡಿದ ಅವರು, ಯತ್ತಿನಹೊಳೆ ಯೋಜನೆ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You may have missed