ರಾಮಚಂದ್ರ ಗೌಡ ನಿಧನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಸಂತಾಪ

ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಅವರ ನಿಧನಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ತೀವ್ರ ಸಂತಾಪ ಸೂಚಿಸಿದ್ದಾರೆ.
ಶೋಕ ಸಂದೇಶದಲ್ಲಿ ಮಾತನಾಡಿರುವ ಅವರು, ರಾಮಚಂದ್ರ ಗೌಡರು ನಿಷ್ಠಾವಂತ ಆರ್ಎಸ್ಎಸ್ ಸ್ವಯಂಸೇವಕರಾಗಿದ್ದು, ಬೆಂಗಳೂರು ನಗರ ಪಾಲಿಕೆ ಸದಸ್ಯರಾಗಿ ನಗರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದಿಂದ ಹಲವು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, ಸಚಿವರಾಗಿಯೂ ಸೇವೆ ಸಲ್ಲಿಸಿದ್ದು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿಬೆಳೆಸಿದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ಹೇಳಿದ್ದಾರೆ.
“ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ. ಅವರ ಅಗಲಿಕೆಯಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ಕರುಣಿಸಲಿ” ಎಂದು ವಿ. ಸೋಮಣ್ಣ ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.
