ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ಗೆ ಭಾರತ ಎ ತಂಡ ಪ್ರಕಟ; ತಿಲಕ್ ವರ್ಮಾ ನಾಯಕ

0
Tilak-Varma-Cricketer

ನವದೆಹಲಿ: ನವೆಂಬರ್ 19ರಿಂದ 29ರವರೆಗೆ ಕತಾರ್‌ನ ದೋಹಾದಲ್ಲಿ ನಡೆಯಲಿರುವ ಪುರುಷರ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭಾರತ ಎ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

15 ಆಟಗಾರರ ತಂಡಕ್ಕೆ ತಿಲಕ್ ವರ್ಮಾ ನಾಯಕನಾಗಿ ಆಯ್ಕೆಯಾಗಿದ್ದು, ರಾಜತ್ ಪಾಟಿದಾರ್ ಉಪನಾಯಕನ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ ಮತ್ತು ರಿಂಕು ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಭ್‌ಸಿಮ್ರನ್ ಸಿಂಗ್ ಹಾಗೂ ಕುಮಾರ್ ಕುಶಾಗ್ರ ವಿಕೆಟ್ ಕೀಪರ್‌ಗಳಾಗಿ ಆಯ್ಕೆಯಾಗಿದ್ದಾರೆ.

ಭಾರತ ಎ ತಂಡ: ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಪ್ರಭ್‌ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ನಾಯಕ), ರಾಜತ್ ಪಾಟಿದಾರ್ (ಉಪನಾಯಕ), ರಿಂಕು ಸಿಂಗ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಸೂರ್ಯಾಂಶ್ ಶೆಡ್ಗೆ, ಶಹಬಾಜ್ ಅಹ್ಮದ್, ವಿಪ್ರಜ್ ನಿಗಮ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಹರ್ಷಿತ್ ರಾಣಾ, ಪ್ರಿನ್ಸ್ ಯಾದವ್ ಮತ್ತು ಅರ್ಷದ್ ಖಾನ್.

Leave a Reply

Your email address will not be published. Required fields are marked *