ಲೈಂಗಿಕ ದೌರ್ಜನ್ಯ ಕೇಸ್: ಮುರುಗಾ ಶ್ರೀಗಳಿಗೆ ಬೇಲ್

muruga matt seer

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಹಲವು ತಿಂಗಳುಗಳಿಂದ ಬಂಧನದಲ್ಲಿರುವ ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಹೈಕೋರ್ಟ್, ಶ್ಯೂರಿಟಿ ಹಾಗೂ ಬಾಂಡ್‌ಗಳನ್ನು ನೀಡುವ ಜೊತೆಗೆ, ಶ್ರೀಗಳು ತಮ್ಮ ಪಾಸ್ ಪೋರ್ಟನ್ನು ಕೋರ್ಟ್ ವಶಕ್ಕೆ ನೀಡಬೇಕು, . ಹಾಗೂ ಚಿತ್ರದುರ್ಗಕ್ಕೆ ಹೋಗಬಾರದೆಂಬ ಷರತ್ತನ್ನು ವಿಧಿಸಿದೆ.