ವಾಲ್ಮೀಕಿ, ಮುಡಾ ಹಗರಣಗಳ ವಿಷಯಾಂತರಕ್ಕಾಗಿ ನಟ ದರ್ಶನ್ ರಾಜಾತಿಥ್ಯ ಫೋಟೋ ವೈರಲ್?
ಹುಬ್ಬಳ್ಳಿ: ವಾಲ್ಮೀಕಿಹಗರಣ ಹಾಗೂ ಮುಡಾ ಹಗರಣಗಳ ವಿಷಯಾಂತರ ಮಾಡಲು ನಟ ದರ್ಶನ್ ಕೇಸ್ ಮುನ್ನೆಲೆಗೆ ತಂದು ಸರ್ಕಾರ ಪಾರಾಗುವ ಪ್ರಯತ್ನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಕುಚಿತ ಷಡ್ಯಂತ್ರ ನಡೆಸಿದೆ ಎಂದು ದೂರಿದ್ದಾರೆ. ಈ ಕೇಸ್‌ಗೆ ಸಂಬಂಧಿಸಿದ ಫೋಟೋಗಳನ್ನು ವೈರಲ್ ಮಾಡಿದೆ ಎಂದು ಆರೋಪಿಸಿರುವ ಸಚಿವ ಜೋಶಿ, ನಟ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೋಗಳನ್ನು ವೈರಲ್ ಮಾಡಿರುವ ಬಗ್ಗೆತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.