ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆ

ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪದ್ಮನಾಭನಗರದ ಶಾಸಕ ಆರ್.ಅಶೋಕ್ ಅವರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು.‌

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ನಂತರ ಆರ್.ಅಶೋಕ್ ಹೆಸರು ಘೋಷಣೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಶೋಕ್ ಹೆಸರನ್ನು ಸೂಚಿಸಿದರೆ, ಮಾಜಿ ಸಚಿವ ಸುನಿಲ್‌ ಕುಮಾರ್‌ ಅವರು ಅನುಮೋದಿಸಿದರು.

You may have missed