ವಿರೋಧಿಗಳ ದಮನಕ್ಕೆ ಅಧಿಕಾರ ಬಳಸಿದರೆ ಬೆಲೆ ತೆರಬೇಕಾಗುತ್ತೆ; ಬೊಮ್ಮಾಯಿ

ಬೆಂಗಳೂರು:ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಟ್ವೀಟ್ ಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಅವರು, ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ.
ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದುಬ ದಿನ ಕಳೆದಿಲ್ಲ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು. ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.