ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

0
Siddaramaiah

ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ.

ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಮುಂದಿಟ್ಟು ಸುದ್ದಿ ಬಿತ್ತರಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ.

 ಈ ಬೆಳೆವಣಿಗೆ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಸಿದ್ದರಾಮಯ್ಯ ಅವರು ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದಾರೆ. ಮುಂದೆಂದಾದರೂ ಅವರು ಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ಟ್ವೀಟ್ ಮಾಡಿರುವ ಅಶೋಕ್, ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದಿದ್ದಾರೆ.

Leave a Reply

Your email address will not be published. Required fields are marked *