ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

dinesh gundoorao

ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು.

ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ.


ಇದೇ ವೇಳೆ, ದಿನೇಶ್ ಗುಂಡೂರಾವ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್‌ನವರಿಗೆ ಹಿಂದೂಗಳೇ ಟಾರ್ಗೆಟ್. ಹಿಂದೂಗಳನ್ನ ಟೀಕೆ ಮಾಡೋದನ್ನ ಕಾಂಗ್ರೆಸ್ ಬ್ರ‍್ಯಾಂಡ್ ಮಾಡಿಕೊಂಡಿದೆ ಎಂದು ದೂರಿದರು. ಕಾಂಗ್ರೆಸ್ ಅವರಿಗೆ ಸಾವರ್ಕರ್ ವಿಲನ್ ಆಗಿದ್ದಾರೆ. ಹಾಗಾಗಿ ಹೀಗೆಲ್ಲ ಮಾತನಾಡುತ್ತಾರೆ. ಸಾವರ್ಕರ್ ಅವರು ಸ್ವಾತಂತ್ರ‍್ಯ ಹೋರಾಟಗಾರರು. ಈಗ ಅವರು ಸತ್ತು ಸ್ವರ್ಗದಲ್ಲಿ ಇದ್ದಾರೆ. ಯಾಕೆ ಅವರ ಬಗ್ಗೆ ಅಪಾದನೆ ಮಾಡುತ್ತಿದ್ದೀರಾ ಎಂದು ಕಾಂಗ್ರೆಸ್ ನಾಯಕರನ್ನು ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ.

You may have missed