ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

0
Twin-earthquakes-rock-Venezuela-300x199-1

ಕ್ಯಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪಗಳ ಸಾವಿನ ಸಂಖ್ಯೆ 3,342ಕ್ಕೆ ಏರಿಕೆಯಾಗಿದ್ದು, 16,740 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ.

ಅಧಿಕೃತ ಮಾಹಿತಿಯ ಪ್ರಕಾರ, ಇದುವರೆಗೆ 6,462 ಮಂದಿಯನ್ನು ರಕ್ಷಿಸಲಾಗಿದ್ದು, 17,345 ಮಂದಿ ಸ್ಥಳಾಂತರಗೊಂಡಿದ್ದಾರೆ. ಪೀಡಿತರಿಗೆ ನೆರವು ನೀಡಲು 80 ತಾತ್ಕಾಲಿಕ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ.

ಜೂನ್ 24ರಂದು ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಅವಳಿ ಭೂಕಂಪಗಳ ಬಳಿಕ ಇದುವರೆಗೆ 995 ನಂತರದ ಕಂಪನಗಳು ದಾಖಲಾಗಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ 29,567 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅವರಲ್ಲಿ 3,281 ಮಂದಿ ವಿದೇಶಿ ರಕ್ಷಣಾ ಸಿಬ್ಬಂದಿಯಾಗಿದ್ದಾರೆ.

ಭೂಕಂಪ ದುರಂತದ ಹಿನ್ನೆಲೆಯಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಸಂತ್ರಸ್ತರ ಕುಟುಂಬಗಳೊಂದಿಗೆ ಸರ್ಕಾರ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ಹತ್ತಾರು ಸಾವಿರ ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಇದೇ ವೇಳೆ, ಭಾರತ ‘ಆಪರೇಷನ್ ಅಮಿಸ್ಟಾಡ್’ ಅಡಿಯಲ್ಲಿ ವೆನೆಜುವೆಲಾಗೆ ಮಾನವೀಯ ನೆರವು ಮುಂದುವರಿಸಿದೆ. ಭಾರತೀಯ ಸೇನೆಯ ವೈದ್ಯಕೀಯ ತಂಡಗಳು ಫೀಲ್ಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿದ್ದು, ಬದುಕುಳಿದವರು ಹಾಗೂ ಅವರ ಕುಟುಂಬಗಳು ಭಾರತೀಯ ವೈದ್ಯಕೀಯ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

Leave a Reply

Your email address will not be published. Required fields are marked *