ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಸೇನೆಯ ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿಯಾಗಿದ್ದಾರೆ.
ಈ ಬಗ್ಗೆ ಸೋಮವಾರ ಮಾಹಿತಿ ಹಂಚಿಕೊಂಡಿರುವ ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಬಿಸಿಲಿನ ತಾಪಮಾನಕ್ಕೆ ಐವರು ಸಾವನ್ನಾಪಿದ್ದಾರೆ ಎಂದು ತಿಳಿಸಿದ್ದಾರೆ.

ಏರ್ ಶೋ ವೇಳೆ ಬಿಸಿಲಿನ ಝಳದಿಂದ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು 90ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಐವರು ಸಾವನ್ನಪ್ಪಿದ್ದಾರೆ ಎಂದು ಸುಬ್ರಮಣಿಯನ್ ತಿಳಿಸಿದ್ದಾರೆ.

You may have missed