‘ಶಕ್ತಿ’ ಯಶೋಗಾಥೆ: 400 ಕೋಟಿ ಬಾರಿ ಮಹಿಳೆಯರ ಉಚಿತ ಪ್ರಯಾಣ

0
KSRTC -Free bus scheme - Shakthi Plan 1

ಬೆಂಗಳೂರು: ಶಕ್ತಿ ಯೋಜನೆಯು ಕರುನಾಡಿನಲ್ಲಿ ಶಕ್ತಿ ಸಂಚಾರವನ್ನೇ ಸೃಷ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಶಕ್ತಿ’ ಗ್ಯಾರೆಂಟಿ ಯೋಜನೆಯ ಯಶಸ್ಸಿನ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಸಿದ್ದರಾಮಯ್ಯ ಅವರು ಪೋಸ್ಟ್ ಹಾಕಿದ್ದಾರೆ. ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ ಎಂದವರು ಬರೆದುಕೊಂಡಿದ್ದಾರೆ.

ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ. ಈವರೆಗಿನ ಒಟ್ಟು ಟಿಕೆಟ್‌ ಮೌಲ್ಯ ರೂ.9,803 ಕೋಟಿ ಆಗಿದ್ದು, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶಕ್ತಿ ನವ ಇತಿಹಾಸ ಸೃಷ್ಟಿಸಿದೆ ಎಂದವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed