ಸಚಿವ ಕೃಷ್ಣಭೈರೇಗೌಡ ವಿರುದ್ಧ ಶಾಸಕ ಬಿ.ಆರ್.ಪಾಟೀಲ್ ಆಕ್ರೋಶ; ಬೆಳಗಾವಿ ಅಧಿವೇಶನದಲ್ಲೂ ಭಾಗಿಯಾಗುವುದಿಲ್ಲ ಎಂದು ಪುನರುಚ್ಚಾರ

congress flag.3

ಕಲಬುರಗಿ: ಸಚಿವ ಕೃಷ್ಣಭೈರೇಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಳಂದ ಶಾಸಕ ಬಿ.ಆರ್.ಪಾಟೀಲ್ ತಾವು ರಾಜೀನಾಮೆ ನಿರ್ಧಾರ ಪ್ರಕಟಿಸಿರುವ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಸಿಎಂ ಗೆ ಬರೆದಿರುವ ಪತ್ರದ ಬಗ್ಗೆ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಿ.ಆರ್.ಪಾಟೀಲ್, ಸಚಿವ ಕೃಷ್ಣಭೈರೇಗೌಡ ವಿರುದ್ಧಅಸಮಾಧಾನ ಹೊರಹಾಕಿದರು. ಸಚಿವರು ನನ್ನ ವಿರುದ್ಧ ಆರೋಪದ ರೀತಿ ಮಾತನಾಡಿದ್ದಾರೆ. ಈ ಆರೋಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಉನ್ನತಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ತನಿಖೆ ಮುಗಿಯುವರೆಗೂ ಸದನಕ್ಕೆ ಹೋಗುವುದಿಲ್ಲ ಎಂದ ಅವರು, ಬೆಳಗಾವಿ ಅಧಿವೇಶನದಲ್ಲೂ ಭಾಗಿಯಾಗುವುದಿಲ್ಲ ಎಂದು ಪುನರುಚ್ಚರಿಸಿದರು.