ಸಿಎಂ ಪತ್ನಿಯ ಮುಡಾ ಸೈಟ್ ವಾಪಸ್; ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ

bjp- congress Flag

ಬೆಂಗಳೂರು: ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದಾರೆ.  ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.

ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದವರು ಪ್ರಶ್ನಿಸಿದ್ದಾರೆ.

‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಅಶೋಕ್ ಹೇಳಿದ್ದಾರೆ.

You may have missed