ಸಿದ್ದರಾಮಯ್ಯ ಆಯ್ತು ಇದೀಗ ಖರ್ಗೆ ಕುಟುಂಬದ ಸರದಿ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ
ಬೆಂಗಳೂರು: ಮುಡಾ ಸೈಟ್ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರಾಜ್ಯ ರಾಜಕಾರಣದಲ್ಲಿ ನಾಯಕರ ಜಟಾಪಟಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ಸಂಚಲನ ಸೃಷ್ಟಿಸಿದೆ.
ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್ಗೆ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪ ರಾಜ್ಯಪಾಲರ ಅಂಗಳ ತಲುಪಿದೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಕುರಿತ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿವರಣೆ ಕೇಳಿದ್ದಾರೆ ಎನ್ನಲಾದ ಸುದ್ದಿ ಕಾಂಗ್ರೆಸ್ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಆರೋಪಗಳ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.