ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನಯಾನಕ್ಕೆ ಸಿಎಂ ಮರು ಚಾಲನೆ

0
Bidar Airport

ಬೀದರ್‌: ಬೀದರ್ – ಬೆಂಗಳೂರು ವಿಮಾನ ಸೇವೆ ಪುನರಾರಂಭವಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್ – ಬೆಂಗಳೂರು ವಿಮಾನ ಸೇವೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ಮರು ಚಾಲನೆ ನೀಡಿದರು.
ಗುರುವಾರದಿಂದ ಬೀದರ್ – ಬೆಂಗಳೂರು ನಡುವೆ ಸ್ಟಾರ್‌ ಏರ್‌ಲೈನ್ಸ್‌ ವಿಮಾನ ಸೇವೆ ಆರಂಭಿಸಲಿದೆ. ಪ್ರತಿ ದಿನ ಬೆಳಗ್ಗೆ 7.30ಕ್ಕೆ ಬೆಂಗಳೂರಿನಿಂದ ಬೀದರ್‌ ಹಾಗೂ ಬೆಳಗ್ಗೆ 9.10ಕ್ಕೆ ಬೀದರ್‌ನಿಂದ ಬೆಂಗಳೂರಿಗೆ ವಿಮಾನ ಸೌಲಭ್ಯ ಸಿಗಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್​ ಬಿ. ಖಂಡ್ರೆ, ಸ್ಥಗಿತಗೊಂಡಿದ್ದ ಬೀದರ್- ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ರಾಜ್ಯ ಸರ್ಕಾರ ಪುನಾರಂಭಿಸಿದೆ. ಇದಕ್ಕಾಗಿ ಕೆಕೆಆರ್​ಡಿಬಿಯಿಂದ ಈ ವರ್ಷ 14 ಕೋಟಿ ರೊಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You may have missed