ಹಾಸನದಲ್ಲಿ ಕಾಡಾನೆ ದಾಳಿಗೆ ಇಬ್ಬರ ಬಲಿ: 10 ಆನೆಗಳ ಸೆರೆಗೆ ಆದೇಶ

0
vidhanasoudha-300x194-1

ಹಾಸನ: ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ 10 ಗಂಡು ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಲು ಸರ್ಕಾರ ಆದೇಶಿಸಿದೆ.

ಬೇಲೂರು ತಾಲೂಕಿನ ಚೌಡನಹಳ್ಳಿಯಲ್ಲಿ ಶನಿವಾರ ಜಯಮ್ಮ ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇಂದು ನಾಗೇನಹಳ್ಳಿ ಗ್ರಾಮದಲ್ಲಿ ಹಫೀಝುರ್ ರೆಹಮಾನ್ ಮೃತಪಟ್ಟಿದ್ದಾರೆ. ಘಟನೆಗಳಿಂದ ಆಕ್ರೋಶಗೊಂಡ ಜನರು ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ್ದರು.

ಮಾನವ-ಆನೆ ಸಂಘರ್ಷ ತಡೆಯಲು ಹಾಸನ ಅರಣ್ಯ ವಿಭಾಗದಲ್ಲಿ ಸಂಘರ್ಷಕ್ಕೆ ಕಾರಣವಾಗಿರುವ 10 ಗಂಡು ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಪ್ರಧಾನ ಮುಖ್ಯ ವನ್ಯಜೀವಿ ಸಂರಕ್ಷಣಾಧಿಕಾರಿ ಅನುಮತಿ ನೀಡಿದ್ದಾರೆ.

ವನ್ಯಜೀವಿ (ರಕ್ಷಣಾ) ಕಾಯ್ದೆ 1972ರ ಸೆಕ್ಷನ್ 11(1)(ಎ) ಅಡಿಯಲ್ಲಿ ಕಾರ್ಯಾಚರಣೆ ನಡೆಯಲಿದೆ. ಸೆರೆಹಿಡಿದ ಆನೆಗಳ ಆರೋಗ್ಯ ಪರಿಶೀಲಿಸಿ, ಸೂಕ್ತ ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತದೆ. ಕಾರ್ಯಾಚರಣೆಗೆ ಸಾಕಾನೆ ತಂಡದ ‘ಎ’ ಮತ್ತು ‘ಸಿ’ ತಂಡಗಳ ಕುಮ್ಕಿ ಆನೆಗಳನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *