ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ಸಿಗಲಿದೆ. ಈ ಸಂಬಂಧದ ಕಾಮಗಾರಿ ತ್ವರಿತವಾಗಿ ಸಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ನ ಹೊಸ ಕಟ್ಟಡದ ಕಾಮಗಾರಿ ವೀಕ್ಷಣೆ ನಡೆಸಿ ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಹೊಸ ಕಟ್ಟಡದ ಕಾಮಗಾರಿಯ ಪರಿಶೀಲನಾ ಸಭ ನಡೆಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಏರ್ಪೋರ್ಟ್ ನ ಅಪ್ರಾನ್ ಏರಿಯಾ ( ವಿಮಾನ ನಿಲ್ಲಿಸುವ ಪ್ರದೇಶ) ವಿಸ್ತರಣೆ ಕುರಿತು ಚರ್ಚಿಸಲಾಯಿತು. ಈಗಾಗಲೇ ತಾತ್ವಿಕವಾಗಿ ಈ ಕಾಮಗಾರಿಕೆಗೆ ಒಪ್ಪಿಗೆ ನೀಡಿದ್ದು ಆದಷ್ಟು ಬೇಗನೆ ಇದಕ್ಕೆ ಟೆಂಡರ್ ಕರೆಯಲಾಗುವುದು ಎಂದು ಪ್ರಲ್ಹಾದ್ ಜೋಷಿ ತಿಳಿಸಿದರು.

ಸದ್ಯಕ್ಕೆ ನಾಲ್ಕು ವಿಮಾನ ನಿಲ್ಲುವ ಸ್ಥಳವನ್ನು ಸುಮಾರು ಹತ್ತು ಏರ್ ಬಸ್, ಬೋಯಿಂಗ್ ನಿಲ್ಲಿಸುವಷ್ಟು ಪ್ರದೇಶವನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

ಮಾರ್ಚ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು 273 ಕೋಟಿ ರೂಪಾಯಿ ವೆಚ್ಚದ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಾಮಗಾರಿಗೆ ಚಾಲನೆ ನೀಡಿದ್ದರು. ವೇಗವಾಗಿ ಕಾಮಗಾರಿ ಸಾಗುತ್ತಿದ್ದು ಇದು ನಮ್ಮ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ನೀಡಲಿದೆ. ಇದರಿಂದ ನಮ್ಮ ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಮತ್ತಷ್ಟು ಮೇಲ್ದರ್ಜೆಯ ಸೌಲಭ್ಯಗಳು ಒದಗಲಿದ್ದು, ಅಭಿವೃದ್ಧಿಯ ಪಥದ ವೇಗ ಇನ್ನೂ ಹೆಚ್ಚಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

You may have missed