ಹೈಕೋರ್ಟ್ ಮೆಟ್ಟಿಲೇರಿದ ಗಾಯಕ ಸೋನು ನಿಗಮ್

ಬೆಂಗಳೂರು: ಕನ್ನಡ ಭಾಷೆ ಬಗ್ಗೆ ಅವಹೇಳನ ಮಡಿದ ಆರೋಪ ಎದುರಿಸುತ್ತಿರುವ ಗಾಯಕ ಸೋನು ನಿಗಮ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಏಪ್ರಿಲ್ 25 ರಂದು ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ನೇರ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹೇಳಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.
‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು’ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಸಲ್ಲಿಸಿರುವ ದೂರಿನ ಆಧಾರದಲ್ಲಿ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಬೆಳವಣಿಗೆ ಹಿನ್ನೆಲೆ ಕಾನೂನು ಸುಳಿಯಲ್ಲಿ ಸಿಲುಕಿರುವ ಸೋನು ನಿಗಮ್, ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಪರಿಶೀಲಿಸಿರುವ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ರಜಾ ಪೀಠದ ವಿಚಾರಣೆಯನ್ನು ಮುಂದೂಡಿದೆ.