ಹೊಸಪೇಟೆ ಬಳಿ ಭೀಕರ ರಸ್ತೆ ಅಪಘಾತ. ಏಳು ಮಂದಿ ದುರ್ಮರಣ

accident

ಹೊಸಪೇಟೆ: ಹೊಸಪೇಟೆ ಬಳಿ ಲಾರಿ ಹಾಗೂ ಕ್ರೂಸರ್ ಮುಖಾ ಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ಹೊಸಪೇಟೆಯ ವ್ಯಾಸನ ಕೆರೆ ಬಳಿ ಈ ಅಪಘಾತ ಸಂಭವಿಸಿದೆ. ಮರಿಯಮ್ಮನಹಳ್ಳಿಯತ್ತ ತೆರೆಳುತ್ತಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಹರಪನಹಳ್ಳಿ ಬಳಿ ಗೋಣಿ ಬಸವೇಶ್ವರ ದೇವಸ್ಥಾನ ಕ್ಕೆ ಹೋಗಿ ವಾಪಸ್ಸಾಗುತ್ತಿದ್ದ ಮಂದಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಮರಿಯಮ್ಮನಹಳ್ಳಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

You may have missed