13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಮಾತ್ರವಲ್ಲ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಬಂಗಾಲ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಮತ್ತು ಪೂರ್ವ ಅರಬ್ಬಿ ಸಮುದ್ರದಲ್ಲಿನ ಹವಾಮಾನದ ವ್ಯತ್ಯಯದಿಂದಾಗಿ ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯ ಉದ್ದಕ್ಕೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ 13 ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 1ರಿಂದ ಮಳೆಯಾಗುವ ಸಾಧ್ಯತೆಗಳಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸಹಿತ 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

You may have missed