2,000 ರೂ ಮುಖಬೆಲೆಯ ನೋಟು ವಿನಿಮಯ ಅವಧಿ ವಿಸ್ತರಣೆ

ದೆಹಲಿ: ದೇಶದಲ್ಲಿ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲಾಗಿದ್ದು ಆ ನೋಟುಗಳ ವಿನಿಮಯ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 30ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಅಕ್ಟೋಬರ್​ 7ವರೆಗೆ ವಿಸ್ತರಿಸಲಾಗಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ರಿವರ್ಸ್​ ಬ್ಯಾಂಕ್, 2,000 ರೂ ಮುಖಬೆಲೆಯ ನೋಟುಗಳನ್ನು ಮರಳಿಸಲು ಮತ್ತು ವಿನಿಮಯ ಮಾಡಿಕೊಳ್ಳಲು ಅಕ್ಟೋಬರ್​ 7ವರೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ. 2,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾಂಕ್​​​ ಠೇವಣಿ ಅಥವಾ ವಿನಿಮಯ ಮಾಡಿಕೊಳ್ಳಲು ಅವಕಾಶ ಇದೆ ಎಂದು ರಿವರ್ಸ್​ ಬ್ಯಾಂಕ್ ಹೇಳಿದೆ.

You may have missed