ಗೃಹಲಕ್ಷ್ಮಿ ಯೋಜನೆಗೆ 3 ವರ್ಷ; ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಬಲ: ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಸಂತಸ ಹಾಗೂ ಹೆಮ್ಮೆಯ ಸಂಗತಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.2 ಕೋಟಿಗೂ ಹೆಚ್ಚು ಕುಟುಂಬಗಳ ಒಡತಿಯರಿಗೆ ಆರ್ಥಿಕ ನೆರವಿನ ಜತೆಗೆ ಸ್ವಾಭಿಮಾನ ಮತ್ತು ಆತ್ಮಸ್ಥೈರ್ಯವೂ ಹೆಚ್ಚಿದೆ ಎಂದು ತಿಳಿಸಿದ್ದಾರೆ.

‘‘ಇದು ಕೇವಲ ಸರ್ಕಾರಿ ಸೌಲಭ್ಯವಲ್ಲ. ಮಹಿಳೆಯರ ನೆಮ್ಮದಿಯ ಬದುಕಿಗೆ ಸರ್ಕಾರ ನೀಡುತ್ತಿರುವ ಪ್ರೀತಿಯ ಆಸರೆ’’ ಎಂದು ಶಿವಕುಮಾರ್ ಹೇಳಿದ್ದಾರೆ.
ಗೃಹಲಕ್ಷ್ಮಿ – ಮಹಿಳಾ ಸಬಲೀಕರಣದ ಯಶಸ್ವಿ 3 ವರ್ಷಗಳು!
ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ನಾಡಿನ 1.2+ ಕೋಟಿ ಕುಟುಂಬಗಳ ಒಡತಿಯರಿಗೆ ಈ ಯೋಜನೆಯು ಆರ್ಥಿಕ ಬಲದ ಜೊತೆಗೆ, ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನೂ ತುಂಬಿದೆ. ಇದು ಕೇವಲ… pic.twitter.com/vr2VXcMPeX
— DK Shivakumar (@DKShivakumar) August 30, 2026
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಶಿವಕುಮಾರ್ ಮನವಿಯೊಂದನ್ನೂ ಮಾಡಿದ್ದಾರೆ. ಸರ್ಕಾರದ ‘ಗ್ಯಾರಂಟಿ ಸಮಿತಿ’ ಸದಸ್ಯರು ಮನೆ ಬಾಗಿಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಒದಗಿಸಿ ಎಂದಿನಂತೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಯೋಜನೆ ಮತ್ತಷ್ಟು ನೆರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
