ಲೋಕ ಅದಾಲತ್‌ನಲ್ಲಿ ಒಂದೇ ದಿನ ಬರೋಬ್ಬರಿ 35.85 ಲಕ್ಷ ಪ್ರಕರಣಗಳು ಇತ್ಯರ್ಥ
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 14 ರಂದು ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಇತಿಹಾಸ ಸೃಷ್ಟಿಸಿದೆ. ಲೋಕ ಅದಾಲತ್‌ನಲ್ಲಿ ಒಂದೇ ದಿನದಲ್ಲಿ 35.85 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ.
ಈ ಕುರಿತಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಹಕ ಅಧ್ಯಕ್ಷರಾದ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ಹೈಕೋರ್ಟ್‌ನ ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ಒದಗಿಸಿದ್ದಾರೆ.
ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 2 ಲಕ್ಷ ಪ್ರಕರಣಗಳು ಮತ್ತು 33.84 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಕೂಡಾ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡಿವೆ.