ಅಮೆರಿಕ; ಕುತೂಹಲ ಮೂಡಿಸಿದ ಅಧ್ಯಕ್ಷೀಯ ಚುನಾವಣೆ
ತೀವ್ರ ಕುತೂಹಲ ಕೆರಳಿಸಿರುವ ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷೀಯ ಹುದ್ದೆಯ ಪೂರ್ವ ಚುನಾವಣೆಯಲ್ಲಿ ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಗೆಲುವಿನ ನಾಗಲೋಟ ಮುಂದುವರೆದಿದೆ.
ಟ್ರಂಪ್ ಅವರ ಸ್ವಕ್ಷೇತ್ರವಾಗಿರುವ ಪ್ಲೋರಿಡಾದ ಪ್ರಾಥಮಿಕ ಚುನಾವಣೆಯಲ್ಲಿ ಸೆನೆಟರ್ ಮಾರ್ಕೊ ರೂಬಿಯೊ ಅವರ ವಿರುದ್ಧ ಜಯ ಗಳಿಸಿದ್ದಾರೆ. ಆ ಮೂಲಕ ಒಟ್ಟು 20 ಅಂಕಗಳೊಂದಿಗೆ ಅಮೆರಿಕಾ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಗಳ ಪಟ್ಟಿಯಲ್ಲಿ ಟ್ರಂಪ್ ಮುಂಚೂಣಿಯಲ್ಲಿದ್ದಾರೆ. ಈ ಬಾರಿಯಅಧ್ಯಕ್ಷೀಯ ಚುನಾವಣೆ ಡಿಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಹಾಗೂ ರಿಪಬ್ಲಿಕನ್ ಪಕ್ಷದ ಟ್ರಂಪ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಈ ನಡುವೆ, ಅಕ್ರಮ ವಲಸಿಗರನ್ನು ಅಮೆರಿಕಾದಿಂದ ಹೊರ ಹಾಕಲಾಗುವುದು ಎಂಬ ಹೇಳಿಕೆ ನೀಡುವ ಮೂಲಕ ಅನಿವಾಸಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಟ್ರಂಪ್ ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸುವ ಭಾರತೀಯರ ಮತ ಸೆಳೆಯಲು ಹೊಸ ಹೇಳಿಕೆಯೊಂದನ್ನು ಹರಿ ಬಿಟ್ಟಿದ್ದಾರೆ. ಅಮೆರಿಕಾಗೆ ಚಾಣಕ್ಷರ ಅವಶ್ಯಕತೆ ಇದೆ.
ಹೀಗಾಗಿ ಅಮೆರಿಕಾದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಇಲ್ಲಿಂದ ಹೊರ ಹಾಕುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಮತ್ತೊಂದೆಡೆ ಟ್ರಂಪ್ ನ ಹರಿತವಾದ ಭಾಷಣಕ್ಕೆ ಹಾಲಿ ಅಧ್ಯಕ್ಷ ಬರಾಕ್ ಒಬಮಾ ಬೇಸರ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಅವರು ಚುನಾವಣಾ ಭಾಷಣಗಳು ವೈಟ್ ಹೌಸ್ ಗೆ ಧಕ್ಕೆ ತರುವಂತಿದೆ. ಹೀಗಾಗಿ ತಮ್ಮ ಭಾಷಣವನ್ನು ಬದಲಾಯಿಸಿಕೊಳ್ಳಬೇಕು ಎಂದು ಟ್ರಂಪ್ ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.