‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿತೇ ಸರ್ಕಾರ?

ಬೆಂಗಳೂರು: ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ” ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಮುಡಾ ಹಗರಣದಲ್ಲಿ ಹಿಂದಿನ ಅಧ್ಯಕ್ಷರ ಅಮಾನತು ಕುರಿತ ಸರ್ಕಾರದ ಆದೇಶ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ,  ‘ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತರ ಗತ್ಯಂತರವಿಲ್ಲದೆ ಕೈಗೆತ್ತಿಕೊಂಡು ಇದೀಗ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜಿ. ಟಿ.ದಿನೇಶ್ ಕುಮಾರ್ ರನ್ನು ಅಮಾನತ್ತು ಗೊಳಿಸಲಾಗಿದೆ. “ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ” ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಟೀಕಿಸಿದ್ದಾರೆ.

ಸರ್ಕಾರ ಈ ಕೂಡಲೇ 50:50ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ. ಅಮಾನತ್ತಿಗೆ ನೀಡಿರುವ ಕಾರಣಗಳಲ್ಲಿ ಶೇಕಡ 50:50ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನಗಳನ್ನು ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ, ಇದು ಏನು ಹೇಳುತ್ತದೆ ಎಂದರೆ ಶೇ.50-50ರ ಅನುಪಾತದಲ್ಲಿ ಪೂರ್ವನ್ವಯವಾಗಿ ಮಾನ್ಯ ಸಿದ್ದರಾಮಯ್ಯನವರ ಪತ್ನಿಯವರಿಗೆ ಮಂಜೂರಾಗಿರುವ 14 ನಿವೇಶನಗಳು ಸಂಪೂರ್ಣ ಅಕ್ರಮ ಹಾಗೂ ನಿಯಮಬಾಹಿರ ಎಂಬುದು ಸ್ಪಷ್ಟವಾಗಿದೆ. ವಿಚಿತ್ರವೆಂದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ 14 ನಿವೇಶನಗಳನ್ನು ಬಳುವಳಿ ನೀಡಿದ ಹಿಂದಿನ ಆಯುಕ್ತರೊಬ್ಬರ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಋಣ ಸಂದಾಯಮಾಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ್ಯಾಯಾಲಯದ ಆದೇಶವನ್ನು ಕಾಯುವ ಅಗತ್ಯವಾದರೂ ಏನಿದೆ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಸರ್ಕಾರವೇ ನಿಮ್ಮ ಧರ್ಮಪತ್ನಿ ಅವರು ಪಡೆದಿರುವ ನಿವೇಶನಗಳು ಅಕ್ರಮ ಹಾಗೂ ನಿಯಮ ಬಾಹಿರ ಎಂದು ಹೇಳಿರುವಾಗ ಈಗಲಾದರೂ ತಮ್ಮ ಭಂಡತನವನ್ನು ಪಕ್ಕಕ್ಕೆ ಸರಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಘನತೆಗೆ ಬಂದಿರುವ ಚ್ಯುತಿಯನ್ನು ಹೋಗಲಾಡಿಸಿ ಗೌರವ ಉಳಿಸಿಕೊಳ್ಳಿ ಎಂದು ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು… pic.twitter.com/XSArP1TxXt

— Vijayendra Yediyurappa (@BYVijayendra) September 3, 2024

You may have missed