Modi USA NSA Meet

ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ಗ್ವಾಲ್ಟ್ಜ್ ಅವರನ್ನು ಭೇಟಿಯಾಗಿ ನಡೆಸಿದ ಮಾತುಕತೆ ಗಮನಸೆಳೆದಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನರೇಂದ್ರ ಮೋದಿ, ಎನ್‌ಎಸ್‌ಎ ಜತೆಗಿನ ಸಭೆ ಫಲಪ್ರದವಾಗಿದೆ ಎಂದಿದ್ದಾರೆ.
ಮೈಕೆಲ್ಗ್ವಾಲ್ಟ್ಜ್ ಅವರು ಯಾವಾಗಲೂ ಭಾರತದ ಉತ್ತಮ ಸ್ನೇಹಿತ. ರಕ್ಷಣೆ, ತಂತ್ರಜ್ಞಾನ ಮತ್ತು ಭದ್ರತೆ ಭಾರತ-ಯುಎಸ್ಎ ಬಾಂಧವ್ಯದ ಪ್ರಮುಖ ಅಂಶಗಳಾಗಿವೆ ಮತ್ತು ಈ ವಿಷಯಗಳ ಬಗ್ಗೆ ನಾವು ಅದ್ಭುತವಾದ ಚರ್ಚೆಯನ್ನು ನಡೆಸಿದ್ದೇವೆ ಎಂದು ಮೋದಿ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿದ್ದಾರೆ.

AI, ಸೆಮಿಕಂಡಕ್ಟರ್‌ಗಳು, ಬಾಹ್ಯಾಕಾಶ ಮತ್ತು ಹೆಚ್ಚಿನ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಬಲವಾದ ಸಾಮರ್ಥ್ಯವಿದೆ ಎಂದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed