‘ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ’; ನೂತನ ಸಿಎಂ ವಾಗ್ದಾನ

0

ಬೆಂಗಳೂರು: ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ’ ಎಂದು ನೂತನ ಸಿಎಂ  ಸಿದ್ದರಾಮಯ್ಯ ವಾಗ್ದಾನ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾರೀ ಜನಸ್ತೋಮದ ನಡುವೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ,  ಜನ ಬದಲಾವಣೆ ಬಯಸಿದ್ದು, ನಾವು ಜನರಿಗೆ ಕೊಟ್ಟಿರುವ ಭರವಸೆ, ಗ್ಯಾರಂಟಿ ಯೋಜನೆಗಳನ್ನು  ಜಾರಿಗೆ ತರುತ್ತೇವೆ ಎಂದರು.

ಇದು ಕನ್ನಡನಾಡಿನ ಜನತೆಗೆ ನೂತನ ಸರ್ಕಾರದ ಕೊಡುಗೆಯಾಗಿದೆ. ನಮ್ಮ ಪ್ರಮಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ ಎಂದರು.‌

Leave a Reply

Your email address will not be published. Required fields are marked *