ನಟಿ ಸ್ಪಂದನಾ ನಿಧನ ಬಗ್ಗೆ ಡಿಸಿಎಂ ಡಿಕೆಶಿ ಶೋಕ

dks - DK Shivakumar

ಬೆಂಗಳೂರು: ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ರಾಘವೇಂದ್ರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶೋಕ ವ್ಯಕ್ತ ಪಡಿಸಿದ್ದಾರೆ.

ಸ್ಪಂದನಾ ಅವರು ಬ್ಯಾಂಕಾಕ್‌ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿರುವ ಡಿಕೆಶಿ, ವಿಜಯ ರಾಘವೇಂದ್ರ ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ  ಸಾಂತ್ವನ ಹೇಳಿದ್ದಾರೆ.

 

You may have missed