BJPಯಲ್ಲಿ ವಿದ್ಯಮಾನ ಬಿರುಸು; ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಕಸರತ್ತು

bjp flag1

ಬೆಂಗಳೂರು: ನೆನೆಗುದಿಗೆ ಬಿದ್ದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕವಾಗಿದೆ. ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಬಗ್ಗೆ ಜನರ ಚಿತ್ತ ಕೇಂದ್ರೀಕೃತವಾಗಿದೆ.

ರಾಜ್ಯದಲ್ಲಿ ಮುಂದಿನ ವಾರ ವಿರೋಧ ಪಕ್ಷದ ನಾಯಕನನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ. ವಿಜಯೇಂದ್ರ ಅವರು ವಿಪಕ್ಷ ನಾಯಕರ ಆಯ್ಕೆ ಸಾಧ್ಯತೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನವೆಂಬರ್ 17ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗುವುದು. ಆ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕರ ಆಯ್ಕೆ ನಡೆಯಲಿದೆ ಎಂದವರು ತಿಳಿಸಿದ್ದಾರೆ.

ಶಾಸಕಾಂಗ ಪಕ್ಷ ಸಭೆಯಲ್ಲಿ ಹೈಕಮಾಂಡ್ ಪರವಾಗಿ ವೀಕ್ಷಕರು ಭಾಗವಹಿಸಲಿದ್ದು, ಶಾಸಕರು ತಮ್ಮ ಅಭಿಪ್ರಾಯಗಳನ್ನು ನೀಡಲಿದ್ದಾರೆ ಎಂದು ವಿಜಯೇಂದ್ರ ತಿಳಸಿದ್ದಾರೆ.