ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಅಭಿಯಾನ; ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆ ರಣತಂತ್ರ

Narendra Modi -Siddaramaiah

ಬೆಂಗಳೂರು: ಕೇಂದ್ರದ ತೆರಿಗೆ ಆದಾಯ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಲವು ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ವೇದಿಕೆಯನ್ನು ಸಜ್ಜುಗೊಳಿಸಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿದ್ದಾರೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ‘ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ’ ಸಿದ್ದರಾಮಯ್ಯ ಅವರು ಈ ಪತ್ರ ಬರೆದಿದ್ದಾರೆ. ಅತಿಹೆಚ್ಚು ತೆರಿಗೆ ಪಾವತಿಸಿಯೂ ಕಡಿಮೆ ಪಾಲು ಪಡೆಯುತ್ತಿರುವ ಬೆಳವಣಿಗೆ ಆಧರಿಸಿ ಈ ಹೆಜ್ಜೆ ಇಟ್ಟಿರುವ ಸಿಎಂ, ತಾವು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಕುರಿತು ಮಾಹಿತಿಯನ್ನು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಪತ್ರದ ಪ್ರತಿಯನ್ನು ಲಗತ್ತಿಸಿದ್ದಾರೆ.

ಕೇಂದ್ರದ ತಾರತಮ್ಯದ ವಿರುದ್ಧ ದನಿ ಎತ್ತಬೇಕಿದೆ ಎಂದು ಪ್ರತಿಪಾದಿಸಿರುವ ಸಿದ್ದರಾಮಯ್ಯ, ತೆರಿಗೆ ಅನ್ಯಾಯವನ್ನು ಸರಿಪಡಿಸಿ ಎಂದು 16ನೇ ಹಣಕಾಸು ಆಯೋಗವನ್ನು ಒತ್ತಾಯಿಸಲು ಬೆಂಗಳೂರಿನಲ್ಲಿ ಸಭೆ ಆಯೋಜಿಸಲಾಗುತ್ತದೆ. ಸಭೆಯ ದಿನಾಂಕ ಮತ್ತು ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುತ್ತದೆ ಎಂದಿದ್ದಾರೆ.

You may have missed