ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್

Basanagowda Patil Yatnal - Yathnal

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಕುರಿತಂತೆ ಕಾಂಗ್ರೆಸ್ ನಾಯಕ ಮನೋಹರ್ ನೇತೃತ್ವದ ನಿಯೋಗವು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದೆ. ಈ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ನೇತೃತ್ವದ ನಿಯೋಗವು ಬುಧವಾರ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಯತ್ನಾಳ್​ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಿತ್ತು.