ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಜಲಸಮಾಧಿ; ಒಂದು ಶವ ಪತ್ತೆ

Drown In River-death

ಬೆಂಗಳೂರು: ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿರುವ ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು ಒಂದು ಮೃತದೇಹ ಮಂಗಳವಾರ ಪತ್ತೆಯಾಗಿದೆ.

ಬಿಬಿಎಂಪಿಯಲ್ಲಿ ಪೌರಕಾರ್ಮಿಕ ಮಹಿಳೆಯ ಮಕ್ಕಳು ಸಾವನ್ನಪ್ಪಿದ್ದು ಅವರನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮಿ (13)‌ ಎಂದು‌ ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಇವರು ಕೆಂಗೇರಿ ಸಮೀಪದ ಹರ್ಷ ಲೇಔಟ್ ಬಳಿ ನೆಲೆಸಿದ್ದರು. ಕೆಲಸಕ್ಕೆಂದು ತಾಯಿ‌ ಹೊರ ಹೋಗಿದ್ದ ಸಂದರ್ಭದಲ್ಲಿ ಈ ಮಕ್ಕಳು ಕೆರೆಯ ಬಳಿಗೆ ತೆರಳಿದ್ದರೆನ್ನಲಾಗಿದ್ದು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸುದೀರ್ಘ ಕಾರ್ಯಾಚರಣೆ ನಡೆಸಿದ್ದಾರೆ.

You may have missed